ನನ್ನ ರಾಜಕೀಯ ಬದುಕು ಅಂಬೇಡ್ಕರ್ ಅವರ ಋಣ: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ, ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯ ಸಂದರ್ಭದಲ್ಲಿ ಸ್ಮರಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದು ಅವರು ತಿಳಿಸಿದರು.
ಅಂಬೇಡ್ಕರ್ ಅವರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ ಹಾಗೂ ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw