ಭಾರತದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಅವರ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು, ಹೈದರಾಬಾದ್ ನಲ್ಲಿ 125 ಅಡಿ ಎತ್ತರದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹೆಲಿಕಾಪ್ಟರ್ ನಿಂದ ಪುಷ್ಪವೃಷ್ಟಿ ಮಾಡಲಾಗಿದ್ದು, ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾರ್ಯಕ್ರಮಕ್ಕೆ ಏಕೈಕ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಈ ಪ್ರತಿಮೆಯು ಭಾರತದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆಯಾಗಲಿದೆ. ಇದನ್ನು ಬುದ್ಧನ ಪ್ರತಿಮೆಯ ಎದುರು, ರಾಜ್ಯ ಸಚಿವಾಲಯದ ಪಕ್ಕದಲ್ಲಿ ನಿರ್ಮಿಸಲಾಗಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw