ಬೀದಿಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿ
ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಆಚರಿಸಲಾಯಿತು.
ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲ ಅವರು ದೇಶ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞರೂ ಮತ್ತು ಮಹಾನ್ ತತ್ವಜ್ಞಾನಿಯಾಗಿದ್ದರು, ಬಾಬಾಸಾಹೇಬರ ಚಿಂತನೆಗಳು ಸಾರ್ವಕಾಲಿಕವಾದುದು ಸ್ವತಂತ್ರ ಭಾರತದ ಮುನ್ನಡೆಗೆ ಅಂಬೇಡ್ಕರ್ ಅವರ ಕೊಡುಗೆ ಮಹತ್ತರವಾದುದು. ಭಾರತದ ಸಂವಿಧಾನದ ರಚನಾ ಸಮಿತಿಯ ಅಧ್ಯಕ್ಷರಾಗಿದ್ದು ಸರ್ವರಿಗೂ ಸಮಪಾಲು ಸಮಬಾಳು ಪರಿಕಲ್ಪನೆ ದೇಶದ ತುಳಿತಕ್ಕೊಳಗಾದ, ದಮನಿತ ಸಮುದಾಯಗಳಿಗೆ ಶ್ರೀರಕ್ಷೆ ಕೊಟ್ಟವರು, ಮನುಷ್ಯ ಮನುಷ್ಯರ ನಡುವಿನ ಶೋಷಣೆಯನ್ನು ಮುಕ್ತಗೊಳಿಸಲು ಬಾಬಾಸಾಹೇಬರ ದೂರದೃಷ್ಟಿತ್ವವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ಕೆ.ಇಮ್ತಿಯಾಝ್ ಹೇಳಿದರು.
ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಉಪಾಧ್ಯಕ್ಷರಾದ ಸಂತೋಷ್ ಆರ್.ಎಸ್, ಮುಖಂಡರಾದ ರಹಿಮಾನ್ ಅಡ್ಯಾರ್, ಇಸ್ಮಾಯಿಲ್ ಉಳ್ಳಾಲ, ರಿಯಾಜ್ ಎಲ್ಯರ್ ಪದವು, ಆದಂ ಬಜಾಲ್, ಆಸೀಫ್ ಬಾವ ಉರುಮನೆ, ಮುಜಾಫರ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw