ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ - Mahanayaka

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

judgment
18/04/2023

ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿ ಸೋಮವಾರ ಆದೇಶ ನೀಡಿದೆ.


Provided by

ಸಾಹಿಲ್(23) ಶಿಕ್ಷೆಗೆ ಗುರಿಯಾದ ಆರೋಪಿ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ನೊಂದ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ನೊಂದ ಬಾಲಕಿಯ ತಂದೆಯ ಹೊಟೇಲ್ ಬಳಿ ಕೆಲಸ ಮಾಡುತ್ತಿದ್ದನು. ಈ ವೇಳೆ ಆರೋಪಿ ನೊಂದ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ ಹೇಳಿದ್ದನು. 2021ರಲ್ಲಿ ಜುಲೈ ತಿಂಗಳಲ್ಲಿ ನೊಂದ ಬಾಲಕಿಯು ತನ್ನ ಊರಿಗೆ ಬಂದಿದ್ದು, ಆ ಸಮಯ ಆಕೆಯ ಜನ್ಮದಿನದಂದು ಸಾಗರದಿಂದ ಬೈಂದೂರಿಗೆ ಬಂದು ಆತ, ಆಕೆಯನ್ನು ರಾತ್ರಿ ಹಾಡಿಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದನು. ಇದೇ ರೀತಿ ಆರೋಪಿ ನೊಂದ ಬಾಲಕಿ ಯನ್ನು ಹಾಡಿಗೆ ಕರೆದುಕೊಂಡು ಹೋಗಿ ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ್ದನು.

ಈ ವಿಚಾರ ತಿಳಿದು ನೊಂದ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆಗಿನ ಪೊಲೀಸ್ ನಿರೀಕ್ಷಕ ಸಂತೋಷ್ ಎ.ಕಾಯ್ಕಿಣಿ ಆರೋಪಿಯ ವಿರುದ್ಧ ದೋಷಾ ರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಒಟ್ಟು 25 ಸಾಕ್ಷಿಗಳನ್ನು ಪೈಕಿ 13 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. ಸಾಂದರ್ಭಿಕ ಸಾಕ್ಷವನ್ನು ಪರಿಗಣಿಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ, 20 ವರ್ಷಗಳ ಕಠಿಣಾ ಶಿಕ್ಷೆ ಮತ್ತು 22,500ರೂ. ದಂಡವನ್ನು ವಿಧಿಸಿ ಆದೇಶ ನೀಡಿದೆ.


Provided by

ನೊಂದ ಬಾಲಕಿಗೆ 1.50ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ