ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮೊಯ್ದಿನ್ ಬಾವ ಕಾಂಗ್ರೆಸ್ ಗೆ ರಾಜೀನಾಮೆ: ಜೆಡಿಎಸ್ ನಿಂದ ಕಣಕ್ಕಿಳಿಯಲು ಸಿದ್ಧತೆ - Mahanayaka

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮೊಯ್ದಿನ್ ಬಾವ ಕಾಂಗ್ರೆಸ್ ಗೆ ರಾಜೀನಾಮೆ: ಜೆಡಿಎಸ್ ನಿಂದ ಕಣಕ್ಕಿಳಿಯಲು ಸಿದ್ಧತೆ

manglore
20/04/2023

ಮಂಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯ್ದಿನ್ ಬಾವ ಜೆಡಿಎಸ್ ಪಕ್ಷ ಸೇರ್ಪಡೆಗೆ ನಿರ್ಧರಿಸಿದ್ದು, ಕಾಂಗ್ರೆಸ್ ಗೆ ರಾಜೀನಾಮೆ ನೀಡಲಿದ್ದಾರೆನ್ನಲಾಗಿದೆ.


Provided by

ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲು ಮೊಯ್ದಿನ್ ಬಾವ ಮುಂದಾಗಿದ್ದು, ಕೊನೆಯ ಕ್ಷಣಗಳವರೆಗೆ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದ ಮೊಯ್ದಿನ್ ಬಾವಗೆ ಕಾಂಗ್ರೆಸ್ ಟಿಕೆಟ್ ಲಭ್ಯವಾಗಿರಲಿಲ್ಲ, ನಿನ್ನೆ ಬೆಂಗಳೂರಿನಲ್ಲೇ ಮೊಯ್ದಿನ್ ಬಾವ ಬೀಡುಬಿಟ್ಟಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮೊಯ್ದಿನ್ ಬಾವ ನಿರಾಸೆಯಿಂದ ಇದೀಗ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನಾಯತ್ ಆಲಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರಿಕೊಂಡಿದ್ದಾರೆ.


Provided by

ಮಂಗಳೂರು ಉತ್ತರದಲ್ಲೇ ಇನಾಯತ್ ಆಲಿ ವಿರುದ್ದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೊಯ್ದಿನ್ ಬಾವಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರ ವಿರುದ್ದ ವಾಗ್ದಾಳಿ ನಡೆಸಿದರು.

ಏಕೈಕ ಶಾಸಕರಾಗಿ ಮೆರೆಯಬೇಕೆಂಬ ವ್ಯಕ್ತಿಯೊಬ್ಬ ಟಿಕೆಟ್ ತಪ್ಪಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಳುಗಿಸಿದ ಎಂಎಲ್ಸಿ ಟಿಕೆಟ್ ತಪ್ಪಿಸಿದ್ದಾರೆ ಎಂದು ಶಾಸಕ ಯು.ಟಿ.ಖಾದರ್ ಮತ್ತು ಎಂಎಲ್ಸಿ ಮಂಜುನಾಥ ಭಂಡಾರಿ ವಿರುದ್ದ ಆರೋಪ ಮಾಡಿದರು.

ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದ ಮೊಯ್ದಿನ್ ಬಾವ, ಕಾರ್ಯಕರ್ತರ ಒತ್ತಾಯದ ಹಿನ್ನೆಲೆ ನಾನು ಜೆಡಿಎಸ್ ಸೇರುತ್ತಿದ್ದೇನೆ. ಕುಮಾರಣ್ಣ ಮತ್ತು ದೇವೇಗೌಡರ ಆಶೀರ್ವಾದ ನನಗೆ ಇದೆ. ಇಂದು ಮಂಗಳೂರು ಉತ್ತರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ