ಚಾಮರಾಜನಗರ: 4 ಕ್ಷೇತ್ರಗಳಲ್ಲಿ 76 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆ

ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ.
ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಕೆ., ಜಾತ್ಯತೀತ ಜನಾತಾದಳ ಅಭ್ಯರ್ಥಿಯಾಗಿ ಎಂ.ಆರ್.ಮಂಜುನಾಥ್, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಮಾದೇಶ.ಎಂ., ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಪ್ರೀತನ್. ಕೆ.ಎನ್., ಪಕ್ಷೇತರ ಅಭ್ಯರ್ಥಿಯಾಗಿ ಸಿ. ಸಿದ್ದಾರ್ಥನ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ನಿಂಗರಾಜ್. ಜಿ., ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ವಿನೋದ್.ಎಸ್. ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಾಗಿ ನಾಗರಾಜು, ರೇಖಾ, ಇಂಡಿಯನ್ ಮೂವ್ ಮೆಂಟ್ ಪಾರ್ಟಿ ಅಭ್ಯರ್ಥಿಯಾಗಿ ಕೆ.ಹೆಚ್.ಅಂಜನಮೂರ್ತಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ರಾಜೇಶ್.ಎಂ., ಮಹಾದೇವ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಡಾ. ಎನ್.ಗುರುಪ್ರಸಾದ್, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಂ. ನಾಗೇಂದ್ರ ಬಾಬು, ಕರ್ನಾಟಕ ಜನಾತದಳ (ಜಾತ್ಯತೀತ) ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಸ್ವಾಮಿ.ಎ.ಎಂ, ಪಕ್ಷೇತರ ಅಭ್ಯರ್ಥಿಗಳಾಗಿ ಚೇತನ.ವಿ., ಎಂ.ಮೂರ್ತಿ, ವೈ.ಆರ್.ವಿಜಯ ಉಪ್ಪಾರ, ಮಹದೇವಸ್ವಾಮಿ.ಎಸ್., ಬಿ.ಎಂ.ಮಹದೇವಸ್ವಾಮಿ, ನಾಗಮಣಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸಿ.ಎಸ್. ನಿರಂಜನ್ ಕುಮಾರ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ಗಣೇಶ್ ಪ್ರಸಾದ್, ಪಕ್ಷೇತರ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw