ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw