ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ: ಪೊಲೀಸರ ಬಿಗಿ ಭದ್ರತೆ - Mahanayaka

ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ: ಪೊಲೀಸರ ಬಿಗಿ ಭದ್ರತೆ

amith shah
24/04/2023

ಚಾಮರಾಜನಗರ: ಮತದಾನಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಚುನಾವಣಾ ರಂಗು ಹೆಚ್ಚುತ್ತಿದೆ. ಅಮಿತ್ ಶಾ ಇಂದು ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಇಂದು 11:20ರ ಸುಮಾರಿಗೆ ಹೆಲಿಕ್ಯಾಪ್ಟರ್‍ ನಲ್ಲಿ ಬಂದಿಳಿಯಲಿದ್ದಾರೆ. ನಂತರ 11:30ರ ಸಮಯಕ್ಕೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ-766 ಮೂಲಕ ಚಾಮರಾಜನಗರ ರಸ್ತೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ವೇಳೆ ಸಚಿವ ಸೋಮಣ್ಣ, ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್, ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಗುಂಡ್ಲುಪೇಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದು   800 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.  ರೋಡ್ ಶೋ ನಡೆಯುವ ಸ್ಥಳಗಳಲ್ಲಿ ಪೊಲೀಸರ ಸರ್ವಗಾವಲು ವ್ಯವಸ್ಥೆ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ