ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ–ನಟ ಟಪೋರಿ ಸತ್ಯ ಇನ್ನಿಲ್ಲ
ಬೆಂಗಳೂರು: ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಟಪೋರಿ ಸತ್ಯ ಖ್ಯಾತಿಯ ಸತ್ಯ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಕಾಲದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಅವರ ಪಾರ್ಥೀವ ಶರೀರವನ್ನು ಬನಶಂಕರಿ ಬಳಿಯ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಟಪೋರಿ ಸತ್ಯ ನಿಧನಕ್ಕೆ ಅವರ ಅಭಿಮಾನಿಗಳು ಮತ್ತು ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಅವರ ಮನೆಯಲ್ಲಿ ಸೂತಕದ ವಾತಾವರಣ ಉಂಟಾಗಿದೆ.
46 ವರ್ಷ ವಯಸ್ಸಿನ ಟಪೋರಿ ಸತ್ಯ ಶ್ವಾಸಕೊಶದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂದ ಲವ್ಸ್ ನಂದಿತ ಸೇರಿದಂತೆ 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ರಾತ್ರಿ ಕೊನೆಯುಸಿರನ್ನು ಎಳೆದಿದ್ದಾರೆ.
ನಟನೆ ಜೊತೆ ನಿರ್ದೇಶನದಲ್ಲಿಯೂ ಆಸಕ್ತಿ ಬೆಳೆಸಿಕೊಂಡಿದ್ದ ಅವರಿಗೆ, ಲೂಸ್ ಮಾದ ಮೊದಲ ಬಾರಿಗೆ ಯೋಗಿ ನಾಯಕನಾಗಿ ನಟಿಸಿದ್ದ ‘ನಂದ ಲವ್ಸ್ ನಂದಿತಾ’ ಜನಪ್ರಿಯತೆ ತಂದುಕೊಟ್ಟಿತ್ತು. ಈ ಸಿನಿಮಾದಲ್ಲಿ ಟಪೋರಿ ಸತ್ಯ ಕ್ವಾಟ್ರು ಅನ್ನೋ ಪಾತ್ರದಲ್ಲಿ ನಟಿಸಿದ್ದರು.
ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದ ಅವರು ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾವನ್ನು ನಿರ್ದೇಶನ ಮಾಡುವ ಹುಮ್ಮಸ್ಸಿನಲ್ಲಿದ್ದರು. ತಮ್ಮ ಹೊಸ ಸಿನಿಮಾಕ್ಕಾಗಿ ಆಡಿಷನ್ ಕೂಡ ಮಾಡುತ್ತಿದ್ದರು. ಆದರೆ ಶ್ವಾಸಕೋಶದ ಸಮಸ್ಯೆಯಿಂದಾಗಿ ಅವರು ಹಠಾತ್ತನೆ ಇಹಲೋಕ ತ್ಯಜಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw