ನಾಡಿಗೆ ಡಾ.ರಾಜ್ ಅವರ ಕೊಡುಗೆ ಅಪಾರ: ಸಚಿವ ಕೆ.ಗೋಪಾಲಯ್ಯ
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ 94 ನೇ ಜನ್ಮ ಜಯಂತಿಯ ಅಂಗವಾಗಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಇಂದು ವರನಟ ಡಾ.ರಾಜಕುಮಾರ್ ರವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಅವರ ಸ್ಮಾರಕ ವೀಕ್ಷಣೆಗಾಗಿ ಪ್ರತಿದಿನ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ ಎಂದರು.
ಸ್ಮಾರಕವನ್ನು ಅಭಿವೃದ್ಧಿ ಮಾಡಲು ಮುಖ್ಯಮಂತ್ರಿಗಳಯವರು ಹಾಗೂ ರಾಜಕುಮಾರ್ ಅವರ ಕುಟುಂಬಸ್ಥರೊಂದಿಗೆ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಕಾರ್ಯ ಕೈಗೊಳ್ಳಲಾಗುವುದು ಎಂದರು.ಇದೇ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw