ಉಳ್ಳಾಲ: ನಾಮಪತ್ರ ವಾಪಸ್ ಪಡೆದು ಮೊಬೈಲ್ ಸ್ವಿಚ್ ಆಫ್ ಮಾಡಿದ ಜೆಡಿಎಸ್ ಅಭ್ಯರ್ಥಿ!
ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಜೆಡಿಎಸ್ ಪಕ್ಷದ ಮುಖಂಡರಿಗೆ ಮಾಹಿತಿಯನ್ನೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ. ಅಲ್ತಾಫ್ ಕುಂಪಲ ಇವರು ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ– ಫಾರಂ ಪಡೆದುಕೊಂಡಿದ್ದರು.
ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಎಪ್ರಿಲ್ 21 ರಂದು ಅಲ್ತಾಫ್ ಅವರು ಜೆಡಿಎಸ್ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಎಪ್ರಿಲ್ 22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆರೋಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw