ಕಾಂಗ್ರೆಸ್ ಹಿರಿಯ ಮುಖಂಡ ಗಂಗಾಧರ ಗೌಡ ಮನೆ, ಸಂಸ್ಥೆಗಳ ಮೇಲೆ ಐಟಿ ರೈಡ್
ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗಂಗಾಧರ ಗೌಡವರ ಮನೆಗಳು ಹಾಗೂ ಕಾಲೇಜು ಸೇರಿದಂತೆ ಮೂರು ಸ್ಥಳಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು.
ಬೆಳ್ತಂಗಡಿ ನಗರದ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲದಲ್ಲಿರುವ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ಮುಂದುವರಿಯಿತು.
ಇಂದಬೆಟ್ಟುವಿನಲ್ಲಿರುವ ಮನೆ ಗಂಗಾಧರ ಗೌಡರ ಪುತ್ರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದ್ದು ಇವರ ಕುಟುಂಬಕ್ಕೆ ಸೇರಿದ ಎಲ್ಲ ಸಂಸ್ಥೆಗಳ ಮೇಲೆ ದಾಳಿ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw