ಅಖಂಡ ಶ್ರೀನಿವಾಸಮೂರ್ತಿಗೆ ಆನೆ ಬಲ: ಬಿಎಸ್ ಪಿ ಪಕ್ಷಕ್ಕೆ ಸೇರ್ಪಡೆ - Mahanayaka

ಅಖಂಡ ಶ್ರೀನಿವಾಸಮೂರ್ತಿಗೆ ಆನೆ ಬಲ: ಬಿಎಸ್ ಪಿ ಪಕ್ಷಕ್ಕೆ ಸೇರ್ಪಡೆ

shrinevas
24/04/2023

ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂದರೆ, 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಬದಲಾಗಿ ಎ.ಸಿ. ಶ್ರೀನಿವಾಸ್ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

2016ರಲ್ಲಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ವಲಸೆ ಬಂದ ವಲಸೆ ಬಂದ 7 ಶಾಸಕರಲ್ಲಿ ಪುಲಿಕೇಶಿ ನಗರದ ಅಖಂಡ ಶ್ರೀನಿವಾಸಮೂರ್ತಿ ಕೂಡ ಒಬ್ಬರಾಗಿದ್ದು, 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಅಖಂಡ ಶ್ರೀನಿವಾಸಮೂರ್ತಿಗೆ ಪುಲಿಕೇಶಿ ನಗರ ಟಿಕೆಟ್ ನೀಡಿದ್ದು, ಮೂಲ ಕಾಂಗ್ರೆಸ್ಸಿಗನಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಸಹಿಸಿಕೊಳ್ಳಲಾಗಲಿಲ್ಲ. ನಂತರ 2020ರಲ್ಲಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಕೆಲವು ಮುಸ್ಲಿಂ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದರು. ಇದರಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಇದರಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದರು.

ತಮ್ಮದೆ ಪಕ್ಷದ ದಲಿತ ಶಾಸಕನ ಮನೆಗೆ ಬೆಂಕಿ ಇಟ್ಟ ರೂವಾರಿಯಾದ ಸಂಪತ್ ರಾಜ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಸಹ ಮಾಡಲಿಲ್ಲ. ಏಕೆಂದರೆ, ಸಂಪತ್ ರಾಜ್ ಅವರು ಈಗಿನ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿದ್ದಾರೆ. ಅಲ್ಲದೇ, ಸಂಪತ್ ರಾಜ್ ಕೂಡ ಪುಲಿಕೇಶಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮತ್ತು ಪರಿಶೀಲನೆ ಪ್ರಕ್ರಿಯೆ ಮುಕ್ತಾಯವಾಗಿದೆ. ಇನ್ನು ನಾಮಪತ್ರ ವಾಪಸ್ ಪಡೆಯಲು ಇಂದು (ಏಪ್ರಿಲ್ 24) ಕೊನೆಯ ದಿನವಾಗಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ