ಉಡುಪಿ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಸಹಿತ ಏಳು ಮಂದಿ ನಾಮಪತ್ರ ವಾಪಾಸ್ಸು - Mahanayaka

ಉಡುಪಿ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಸಹಿತ ಏಳು ಮಂದಿ ನಾಮಪತ್ರ ವಾಪಾಸ್ಸು

namapathra
24/04/2023

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಉಡುಪಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಏಳು ಮಂದಿ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಜಯರಾಜ್, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ದೀನ ಪ್ರಭಾಕರ ಸಾಲ್ಯಾನ್, ಕೆ.ಕೃಷ್ಣಮೂರ್ತಿ ಆಚಾರ್ಯ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಅಬ್ದುಲ್ ರಝಾಕ್ ಶಾಬನ್ ಅಹ್ಮದ್ ಮತ್ತು ಅಬ್ದುಲ್ ರಹಿಮಾನ್,ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣ ಶೆಟ್ಟಿ ಮತ್ತು ಕೆ.ಹರೀಶ್ ಪೂಜಾರಿ ನಾಮಪತ್ರಗಳನ್ನು ಹಿಂಪಡೆದಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿರುವುದಿಲ್ಲ. ಅಂತಿಮವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 9, ಕುಂದಾಪುರದಲ್ಲಿ 5, ಉಡುಪಿಯಲ್ಲಿ 7, ಕಾಪು ನಲ್ಲಿ 5 ಹಾಗೂ ಕಾರ್ಕಳದಲ್ಲಿ 9 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ