ನವ ಉಡುಪಿ ನಿರ್ಮಾಣಕ್ಕಾಗಿ ಕ್ರಿಯಾಶೀಲ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಗೆಲ್ಲಿಸಿ : ಪ್ರತಾಪ್ ಸಿಂಹ ನಾಯಕ್
ಡಾ ವಿ ಎಸ್ ಆಚಾರ್ಯ ಕಂಡ ನವ ಉಡುಪಿ ನಿರ್ಮಾಣದ ಕನಸು ನನಸಾಗಿಸಲು ಬಿಜೆಪಿಯ ಸಮರ್ಥ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
3 ಬಾರಿ ಉಡುಪಿ ನಗರ ಸಭೆಯ ಸದಸ್ಯರಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲೂ ತಮ್ಮ ಕಾರ್ಯವೈಖರಿಯಿಂದ ಗುರುತಿಸಿಕೊಂಡು, ಧಾರ್ಮಿಕ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಕೈ ಜೋಡಿಸಬೇಕು ಎಂದರು.
ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪರವಾಗಿ ತೆಂಕಪೇಟೆ, ಕರಂಬಳ್ಳಿ ವಾರ್ಡಿನಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚನೆ ಮಾಡಿ ಮಾತನಾಡಿದರು.
ಯಶ್ ಪಾಲ್ ಸುವರ್ಣ ಮಾತನಾಡಿ ಕ್ಷೇತ್ರದಾದ್ಯಂತ ಮತದಾರರಿಂದ ಬಿಜೆಪಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರಕ್ಕೆ ಜನ ಆಶೀರ್ವಾದ ನೀಡಲಿದ್ದಾರೆ ಎಂದರು.
ಶಾಸಕ ರಘುಪತಿ ಭಟ್ ಮಾತನಾಡಿ ಕ್ಷೇತ್ರದ ಅಭಿವೃದ್ಧಿಯೇ ಪ್ರಥಮ ಆದ್ಯತೆಯನ್ನಾಗಿಸಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರಾಘವೇಂದ್ರ ಕಿ, ದಿನೇಶ್ ಅಮೀನ್, ನಗರ ಸಭಾ ಸದಸ್ಯರಾದ ಶ್ರೀಮತಿ ಮಾನಸ ಪೈ, ರಶ್ಮಿ ಭಟ್ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw