ಜಗದೀಶ್ ಶೆಟ್ಟರ್ ಬೆಂಬಲಿಗರಿಗೆ ಬಿಗ್ ಶಾಕ್ ನೀಡಿದ ಬಿಜೆಪಿ!
ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಿಗೆ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದ್ದು, 27 ಜನ ಶೆಟ್ಟರ್ ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟಿಸಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ ಅವರು 27 ಜನರನ್ನು ಬಿಜೆಪಿಯಿಂದ ಉಚ್ಛಾಟಿಸಿದೆ.
ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರೂಪಾಕ್ಷ ರಾಯನಗೌಡರ್, ವಿಜಯಲಕ್ಷ್ಮೀ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw