ಅಭ್ಯರ್ಥಿಗೆ ಸೋಮಣ್ಣ ಆಮಿಷ ಆಡಿಯೋ: ಮೂವರ ವಿರುದ್ಧ ಕೇಸ್ ದಾಖಲು
ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್ ಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮೂವರು ಅಪರಿಚಿತರ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮಣ್ಣ, ನಟರಾಜು, ಸುದೀಪ್ ಎಂದು ಆಡಿಯೋದಲ್ಲಿ ಉಲ್ಲೇಖಗೊಂಡ ಮೂವರು ಹೆಸರುಗಳ ಮೇಲೆ ಅಪರಿಚಿತರು ಎಂದು ನಮೂದಿಸಿ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗಾನಂದ ಮೌಖಿಕ ಆದೇಶದ ಮೇರೆಗೆ ಜಯಣ್ಣ ಎಂಬವರು ದೂರು ಕೊಟ್ಟಿದ್ದು ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw