ತೆರೆದ ಮ್ಯಾನ್ ಹೋಲ್ ಗೆ ಬಿದ್ದು 10 ವರ್ಷದ ಬಾಲಕಿ ಸಾವು
ಹೈದರಾಬಾದ್ :ಹಾಲು ಖರೀದಿಸಲು ಹೋದ ಬಾಲಕಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಸಿಕಂದರಾಬಾದ್ ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು10 ವರ್ಷದ ಮೌನಿತ ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ ಬಾಲಕಿಯು ಕಾಲು ಜಾರಿ ಮ್ಯಾನ್ ಹೋಲ್ ಗೆ ಬಿದ್ದು ಕೊಚ್ಚಿಹೋಗಿದ್ದಾಳೆ ಎನ್ನಲಾಗಿದೆ.
ನಂತರ ವಿಪತ್ತು ನಿರ್ವಹಣಾ ಪಡೆ ತಂಡವು ಸ್ಥಳಕ್ಕೆಆಗಮಿಸಿ ಮೃತದೇಹವನ್ನು ಹೊರತೆಗೆದು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಂಕಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಹೈದರಾಬಾದ್ ಮೇಯರ್ ಗದ್ವಾಲ್ ವಿಜಯಲಕ್ಷ್ಮಿ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw