ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಅಪಘಾತಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅಲ್ಲೊಂದು ಇಲ್ಲೊಂದು ದುರ್ಘಟನೆಗಳು ಸಂಭವಿಸುತ್ತಲೇ ಇವೆ. ಇದೀಗ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದಾರೆ. ಈ ವೇಳೆ ಮತ್ತೊಂದು ಕಾರು ಬಂದು ಅವರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಒಂದೇ ಬೈಕ್ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಗೆ ಬಿದ್ದ ಮೂವರು ಅಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw