ಇಂದು ವಿ.ಸೋಮಣ್ಣ, ಎನ್.ಮಹೇಶ್, ನಿರಂಜನ್ ಕುಮಾರ್, ಡಾ.ಪ್ರೀತನ್ ಪರ ಕಿಚ್ಚ ಸುದೀಪ್ ರೋಡ್ ಶೋ
ಚಾಮರಾಜನಗರ: ಇಂದು ಚಾಮರಾಜನಗರದ ಪ್ರಚಾರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ವಿ.ಸೋಮಣ್ಣ, ನಿರಂಜನ್ ಕುಮಾರ್, ಎನ್.ಮಹೇಶ್, ಡಾ.ಪ್ರೀತನ್ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ.
ನಾಯಕ ಸಮುದಾಯ, ಕಿಚ್ಚನ ಅಭಿಮಾನಿಗಳಿಗೆ ಗಾಳ ಹಾಕಲೂ ಬಿಜೆಪಿ ಪ್ಲ್ಯಾನ್ ಮಾಡಿದ್ದು, ಚಾಮರಾಜನಗರ ಜಿಲ್ಲಾದ್ಯಂತ ಕಿಚ್ಚ ಸುದೀಪ್ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಗುಂಡ್ಲುಪೇಟೆ, ಚಾಮರಾಜನಗರ, ಕೊಳ್ಳೇಗಾಲ,ಹನೂರು ಕ್ಷೇತ್ರದಲ್ಲಿ ಇಂದು ರೋಡ್ ಶೋನಲ್ಲಿ ಕಿಚ್ಚ ಭಾಗವಹಿಸಲಿದ್ದಾರೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ತನಕ ಕಿಚ್ಚ ಪ್ರಚಾರದ ಕಿಚ್ಚು ಹಚ್ಚಲಿದ್ದಾರೆ. ರೋಡ್ ಶೋ ವೇಳೆ ಛಲವಾದಿ ನಾರಾಯಣಸ್ವಾಮಿ ಹಾಗೂ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw