ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ರಸ್ತೆಯಲ್ಲೇ ಕಿರುಕುಳ ನೀಡಿದ ಕಾನ್ ಸ್ಟೇಬಲ್ ಅರೆಸ್ಟ್!
ಯೂನಿಫಾರ್ಮ್ ನಲ್ಲಿರುವ ಪೊಲೀಸ್ ಕಾನ್ ಸ್ಟೇಬಲ್ ವೋರ್ವ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ಆಕೆಗೆ ಕಿರುಕುಳ ನೀಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ಕಾನ್ ಸ್ಟೇಬಲ್ ನ್ನು ತಡೆದ ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿರುವುದು ಯಾಕೆ ಎಂದು ಸಾರ್ವಜನಿಕರು ಪ್ರಶ್ನಿಸಿದಾಗ, ಆಕೆ ನನ್ನ ಸ್ನೇಹಿತನ ಮಗಳು ಎಂದು ಸಾರ್ವಜನಿಕರನ್ನು ನಂಬಿಸಲು ಆತ ಮುಂದಾಗಿದ್ದಾನೆ.
ಕಳೆದ ಮಂಗಳವಾರ ಘಟನೆ ಬೆಳಕಿಗೆ ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಕಾಂಟ್ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಶಹದತ್ ಅಲಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಇನ್ನೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಕೂಡ ಇರಲಿಲ್ಲ. ಹೀಗಾಗಿ ಈತನ ವಿರುದ್ಧ ಹಲವಾರು ಅನುಮಾನಗಳು ಕೂಡ ಕೇಳಿ ಬಂದಿವೆ. ಸಾರ್ವಜನಿಕರಿಗೆ ರಕ್ಷಣೆ ಕೊಡಬೇಕಾದ ಅಧಿಕಾರಿ, ಶಾಲೆಗೆ ಹೋಗುವ ಹೆಣ್ಣು ಮಕ್ಕಳನ್ನು ಚುಡಾಯಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಯು ಹಲವು ದಿನಗಳಿಂದಲೂ ಈ ಬಾಲಕಿಯ ಹಿಂದೆ ಬಿದ್ದು, ಫೋನ್ ನಂಬರ್ ಕೇಳುತ್ತಿದ್ದ ಅನ್ನೋ ಆರೋಪ ಕೂಡ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw