ಮುಳುಗಿದ ಪ್ರವಾಸಿ ದೋಣಿ: 4 ಮಕ್ಕಳು ಸೇರಿದಂತೆ 17 ಮಂದಿಯ ದುರಂತ ಸಾವು - Mahanayaka

ಮುಳುಗಿದ ಪ್ರವಾಸಿ ದೋಣಿ: 4 ಮಕ್ಕಳು ಸೇರಿದಂತೆ 17 ಮಂದಿಯ ದುರಂತ ಸಾವು

kerala
08/05/2023

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಜಲ ಸಮಾಧಿಯಾಗಿದ್ದಾರೆ.


Provided by

ಡಬಲ್‌ ಡೆಕ್ಕರ್‌ ದೋಣಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಥೂವಲ್‌ ಥೀರಮ್‌ ಎಂಬ ಪ್ರವಾಸಿ ತಾಣದಲ್ಲಿರುವ ಪುರಪುಳ ನದಿಯಲ್ಲಿ ದೋಣಿ ವಿಹಾರ ನಡೆಸಲಾಗುತ್ತಿತ್ತು.

ಭಾನುವಾರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಏಕಾಏಕಿ ದೋಣಿ ಮುಳುಗಿದ್ದು, ತಕ್ಷಣವೇ ಸ್ಥಳೀಯ ಮೀನುಗಾರರು ಹಾಗೂ ಸ್ಥಳೀಯರು 10 ಮಂದಿಯನ್ನು ರಕ್ಷಿಸಿದ್ದಾರೆ. ಉಳಿದ 17 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


Provided by

ಈಗಾಗಲೇ 17 ಮಂದಿಯ ಮೃತ ದೇಹಗಳನ್ನು ಮೇಲೆತ್ತಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗುವ ಭೀತಿಯಿದೆ ಎಂದು ಕೇರಳ ಸಚಿವ ಅಬ್ದುರ್ರಹ್ಮಾನ್ ತಿಳಿಸಿದ್ದಾರೆ. ದೋಣಿಯಲ್ಲಿ ಮಿತಿಗಿಂತ ಹೆಚ್ಚು ಜನರಿಗೆ ಪ್ರವೇಶ ನೀಡಲಾಗಿತ್ತು. ಜನರ ಸುರಕ್ಷತೆಗೆ ಜೀವ ರಕ್ಷಕ ಸಾಧನಗಳಾದ ಜಾಕೆಟ್ ಗಳನ್ನು ಕೂಡ ನೀಡಿರಲಿಲ್ಲ ಎಂದು ಕೇರಳದ ಮಾಧ್ಯಮಗಳು ವರದಿ ಮಾಡಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ