ಬಿಜೆಪಿಯ ಹಿರಿಯ ನಾಯಕ, ಸಂಘಟನಾ ಚತುರ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ
ಮಂಗಳೂರು: ನಗರದ ಬಿಜೆಪಿಯ ಹಿರಿಯ ಕಾರ್ಯಕರ್ತ ಹಾಗೂ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಇಂದು ಕಾಂಗ್ರೆಸ್ ಸೇರಿದ್ದಾರೆ.
ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್.ಲೋಬೋ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಬಾಲ್ಯದಿಂದಲೇ ಆರ್ಎಸ್ಎಸ್ ಗರಡಿಯಲ್ಲಿ ಬೆಳೆದ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸಂಘಟನಾ ಚತುರರಾಗಿದ್ದರು. ಕೆಲ ವರ್ಷಗಳಿಂದ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯದಿಂದ ಮನನೊಂದು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw