ಪ್ರಧಾನಿಗಳು ಬೆಲೆ ಏರಿಕೆ ಬಗ್ಗೆ ಮಾತನಾಡದೇ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ: ಪ್ರಿಯಾಂಕಾ ಗಾಂಧಿ
ಜನರು ಬೆಲೆ ಏರಿಕೆ ಉರಿಯಲ್ಲಿ ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ. ರಾಜ್ಯದಲ್ಲಿ ಆತಂಕ ಇರುವುದು 40 ಪರ್ಸೆಂಟ್ ಸರ್ಕಾರದ ನಡೆಯ ಬಗ್ಗೆ. ಇದನ್ನು ಮೊದಲು ತಡೆಯಿರಿ. ರಾಜ್ಯದಲ್ಲಿ ಆತಂಕ ಇರುವುದು ಜನವಿರೋಧಿ ಸರ್ಕಾರದ ಹಗರಣಗಳ ಬಗ್ಗೆ, ಭ್ರಷ್ಟಾಚಾರ ಬಗ್ಗೆ ಯಾವುದೇ ಮಾತನಾಡದ ನೀವು ಜನರ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಿರಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.
ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತುಳುನಾಡಿನ ಸಮಸ್ತ ಜನತೆಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು. ಕರಾವಳಿ ದೈವದ ನಾಡು, ಬಪ್ಪನಾಡು ಕ್ಷೇತ್ರ, ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಾನವು ಸಂಪತ್ತು, ಶಾಂತಿಯ ತಾಣ ಎಂದು ವರ್ಣನೆ ಮಾಡಿದರು.
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ್ ಬೆಲೆಗಳು ಏರಿಕೆ ಆಗಿವೆ. ಶಿಕ್ಷಣ, ಉದ್ಯೋಗಕ್ಕೆ ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳು ಬದಲಾವಣೆ ಆಗುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಕೋಟಿ ಕೋಟಿ ಮಾರಾಟ ಆಗುತ್ತಿದೆ. ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಸಂಪೂರ್ಣ ಈಡೇರಿಸಲಿದೆ. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಒಂದೇ ವರ್ಷದಲ್ಲಿ ಭರ್ತಿ ಮಾಡುತ್ತೇವೆ.
ಮೀನುಗಾರರಿಗೆ ಡಿಸೇಲ್ ಸಹಾಯಧನ, ನಾರಾಯಣ ಗುರು ನಿಗಮಕ್ಕೆ ಅನುದಾನ, ಐಟಿ, ಗಾರ್ಮೆಂಟ್ ಕ್ಷೇತ್ರಗಳ ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರವು ಒತ್ತು ನೀಡಲಿದೆ ಎಂದರು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಮಿಥುನ್ ರೈ, ಇನಾಯತ್ ಅಲಿ, ಮಾಜಿ ಸಚಿವ ಜನಾರ್ದನ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw