ಸೇತುವೆಯಿಂದ ಉರುಳಿದ ಬಸ್: 22 ಮಂದಿ ಪ್ರಯಾಣಿಕರ ದುರಂತ ಸಾವು
ಮಧ್ಯಪ್ರದೇಶ: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ.
ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಬಸ್ ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಡೊಂಗರ್ ಗಾಂವ್ ಬಳಿಯ ಬೋರಾಡ್ ನದಿ ಸೇತುವೆಯ ಮೇಲಿನ ಸೇತುವೆಯ ಹಳಿ ಮುರಿದು ಇಂದೋರ್ ಕಡೆಗೆ ಹೋಗುತ್ತಿದ್ದ ಬಸ್ ಉರುಳಿ ಬಿದ್ದಿದೆ ಎಂದು ಖಾರ್ಗೋನ್ ಉಪವಿಭಾಗಾಧಿಕಾರಿ ರಾಕೇಶ್ ಮೋಹನ್ ಶುಕ್ಲಾ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಂತರ, ಮಧ್ಯಪ್ರದೇಶ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ತೀವ್ರವಾಗಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಲು ರಾಜ್ಯ ಸರ್ಕಾರ 50,000 ರೂ. ಹಾಗೂ ಗಾಯಗೊಂಡವರಿಗೆ 25,000 ರೂ. ಘೋಷಿಸಿದೆ.
ಇಂದೋರ್ ಗೆ ತೆರಳುತ್ತಿದ್ದಾಗ ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw