ಇವಿಎಂ‌ನಲ್ಲಿ ದೋಷ ಕಂಡುಬಂದಲ್ಲಿ ಬದಲಾಯಿಸಲಾಗುವುದು - Mahanayaka
8:21 AM Thursday 12 - December 2024

ಇವಿಎಂ‌ನಲ್ಲಿ ದೋಷ ಕಂಡುಬಂದಲ್ಲಿ ಬದಲಾಯಿಸಲಾಗುವುದು

evm
09/05/2023

ಬೆಂಗಳೂರು: ಇವಿಎಂನಲ್ಲಿ (EVM) ದೋಷ ಏನಾದರೂ ದೋಷ ಕಂಡು ಬಂದಲ್ಲಿ ಕೂಡಲೇ ಇವಿಎಂ ಯಂತ್ರವನ್ನು ಬದಲಾಯಿಸಲಾಗುವುದು ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.

ನಾಳೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ. 42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್‌ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್‌ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದರು.

ಒಂದು ಬಸ್‌ ನಲ್ಲಿ ಐದರಿಂದ ಆರು ಮತ‌ಕಟ್ಟೆಗಳಿಗೆ ಸಂಬಂಧಿಸಿದ ಸಿಬ್ಬಂದಿಯನ್ನು ಡ್ರಾಪ್ ಮಾಡಲಾಗುವುದು. ನಾಳೆ ಬೆಳಗ್ಗೆ ಮತಗಟ್ಟೆಗಳಲ್ಲಿ 6 ಗಂಟೆಗೆ ಅಣಕು ಮತದಾನ ನಡೆಯಲಿದೆ. ನಂತರ ಬೆಳಗ್ಗೆ ಏಳು ಗಂಟೆಗೆ ಮತದಾನ (Polling) ಆರಂಭವಾಗಲಿದೆ. ಇವಿಎಮ್‌ ಗಳಲ್ಲಿ ದೋಷ ಕಂಡು ಬಂದರೆ ತಕ್ಷಣವೇ ಸರಿಪಡಿಸಲು ಸೆಕ್ಟರ್ ಆಫೀಸರ್‌ಗಳನ್ನು ನಿಯೋಜನೆ ಮಾಡಲಾಗಿದೆ. 30 ನಿಮಿಷಗಳ ಸರಿ ಮಾಡುವಂತಹ ಕೆಲಸ ಮಾಡಲಾಗುವುದು ಎಂದರು.

ಕ್ಯೂ ಆ್ಯಪ್ ಮೂಲಕ ಮತದಾನಕ್ಕೆ ಸಮಯ ನಿಗದಿ ಪಡಿಸಿಕೊಳ್ಳಬಹುದು. 600 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. ಪ್ರತಿ 15 ರಿಂದ 20 ನಿಮಿಷಕ್ಕೆ ಕ್ಯೂ ಆ್ಯಪ್ ಅಪ್‌ ಡೇಟ್ ಆಗಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಮಹಿಳಾ ಮಾದರಿ ಮತಗಟ್ಟೆಗಳಿವೆ. ಉಳಿದಂತೆ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಮಾಡಲಾಗಿದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶವಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ