ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ: ಬಸ್ ಗಳಿಲ್ಲದೇ ಸಾರ್ವಜನಿಕರ ಪರದಾಟ - Mahanayaka
6:25 PM Thursday 12 - December 2024

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ: ಬಸ್ ಗಳಿಲ್ಲದೇ ಸಾರ್ವಜನಿಕರ ಪರದಾಟ

dakshina kannada
10/05/2023

ವಿಧಾನಸಭಾ ಚುನಾವಣೆ: ದ.ಕ.ಜಿಲ್ಲೆಯಲ್ಲಿ ಮತದಾನ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ  ಅರಂಭವಾಗಿದೆ.

ಬೆಳಗ್ಗೆಯೇ ಕೆಲವು ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿರುವುದು ಕಂಡು ಬಂತು. ಮತದಾನವು ಸುಸೂತ್ರವಾಗಿ ನಡೆಯಲು ಜಿಲ್ಲೆಯಲ್ಲಿ ಪೊಲೀಸ್, ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿ ಸಹಿತ 4,500ಕ್ಕೂ ಮಂದಿಯನ್ನು ನಿಯೋಜನೆ ಮಾಡಲಾಗಿದೆ.

ಜಿಲ್ಲೆಯಲ್ಲಿ 8,70,991 ಪುರುಷ ಮತ್ತು 9,10,314 ಮಹಿಳಾ ಹಾಗೂ 84 ತೃತೀಯ ಲಿಂಗಿಗಳ ಸಹಿತ 17,81,389 ಮಂದಿ ಮತದಾರರಿದ್ದಾರೆ. ಜಿಲ್ಲೆಯಲ್ಲಿ 1,860 ಮತಗಟ್ಟೆಗಳನ್ನು ತೆರೆಯಲಾಗಿದೆ ಅದರಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 1,184 ಮತ್ತು ನಗರ, ಪಟ್ಟಣ ಪ್ರದೇಶದಲ್ಲಿ 676 ಮತಗಟ್ಟೆ ಕೇಂದ್ರಗಳು ಸೇರಿವೆ.

ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ 939 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 164 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು, ಉಳಿದ ಮತಗಟ್ಟೆಗಳಲ್ಲಿ ಸಿಪಿಎಂಎಫ್‌ ಗಳನ್ನು ನಿಯೋಜನೆ ಮಾಡಲಾಗಿದೆ. ಶಾಂತಿಯುತವಾಗಿ ಮತದಾನ ಜರುಗಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಲಾಗಿದೆ. ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಬಸ್ ಗಳಿಲ್ಲದೇ ಜನರ ಪರದಾಟ:

bus

ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ನಿನ್ನೆ ರಾತ್ರಿಯಿಂದಲೇ ತಮ್ಮ ಊರಿಗೆ ತೆರಳಿ ಮತ ಚಲಾಯಿಸಲು ತೆರಳುವವರಿಗೆ ತೀವ್ರ ಸಮಸ್ಯೆಯಾಗಿದೆ. ಖಾಸಗಿ ಬಸ್ ಗಳಲ್ಲಿ ಜನರನ್ನು ಮಿರಿಗಿಂತಲೂ ಅಧಿಕ ಸಂಖ್ಯೆಯಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂತು. ಇಂದು ಬೆಳಗ್ಗೆ ಕೂಡ ಜನರು ಬಸ್ ಗಳಿಲ್ಲದೇ ರಸ್ತೆ ಬದಿಯಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡು ಬಂದವು. ಮಿತಿಗಿಂತ ಅಧಿಕ ಇರುವ ಬಸ್ ಗಳಲ್ಲಿ ತೆರಳಲು ಮುಂದಾಗದ ಸಾಕಷ್ಟು ಜನರು ಊರಿಗೆ ತೆರಳದೇ ವಾಪಸ್ ಹೋಗುತ್ತಿರುವ ದೃಶ್ಯ ಕಂಡು ಬಂತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ