ಶಾಕಿಂಗ್ ನ್ಯೂಸ್ : ವೈದ್ಯೆಯನ್ನೇ ಕತ್ತರಿಯಿಂದ ಇರಿದು ಕೊಂದ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆತಂದಿದ್ದ ಆರೋಪಿ - Mahanayaka
10:54 AM Thursday 12 - December 2024

ಶಾಕಿಂಗ್ ನ್ಯೂಸ್ : ವೈದ್ಯೆಯನ್ನೇ ಕತ್ತರಿಯಿಂದ ಇರಿದು ಕೊಂದ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆತಂದಿದ್ದ ಆರೋಪಿ

kollm
10/05/2023

ಕೊಲ್ಲಂ: ಕೇರಳದ (Kerala) ಕೊಲ್ಲಂನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯೊಬ್ಬರನ್ನು(Doctor) ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತಂದ ಶಾಲಾ ಶಿಕ್ಷಕನೊಬ್ಬ ಬುಧವಾರ ಕತ್ತರಿಯಿಂದ ಇರಿದು ಕೊಂದಿರುವ ಘಟನೆ ವರದಿ ಆಗಿದೆ.

ಕೊಟ್ಟಾರಕ್ಕರ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಂದನಾ ದಾಸ್ (23) (Vandana Das)ಎಂಬ ವೈದ್ಯೆಯ ಎದೆ ಮತ್ತು ಕತ್ತಿನ ಮೇಲೆ ಆರೋಪಿ ಅನೇಕ ಬಾರಿ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಂದನಾ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಸಾವಿಗೀಡಾಗಿದ್ದಾರೆ.

ಆರೋಪಿ ಸಂದೀಪ್ ಮಂಗಳವಾರ ರಾತ್ರಿ ತನ್ನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದ. ಆತನ ಹಿಂಸಾತ್ಮಕ ವರ್ತನೆಯಿಂದ ಬೇಸತ್ತ ಮನೆಯವರು ಆತನ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಆತನ ಕಾಲಿಗೆ ಸಣ್ಣ ಗಾಯವಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಕಡ್ಡಾಯ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿತ್ತು.

ಸಂದೀಪ್ ಗಾಯಕ್ಕೆ ವೈದ್ಯೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಡ್ರೆಸ್ಸಿಂಗ್ ರೂಮ್ ನಲ್ಲಿದ್ದ ಶಸ್ತ್ರಚಿಕಿತ್ಸೆಯ ಕತ್ತರಿಯನ್ನು ಕೈಗೆತ್ತಿಕೊಂಡು ಏಕಾಏಕಿ ವೈದ್ಯೆ ವಂದನಾಳ ಎದೆಗೆ ಮತ್ತು ಕುತ್ತಿಗೆಗೆ ಪದೇ ಪದೇ ಇರಿದಿದ್ದಲ್ಲದೆ ಆಸ್ಪತ್ರೆಗೆ ಕರೆದೊಯ್ದ ಪೊಲೀಸರ ಮೇಲೂ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವಂದನಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಸಾವಿಗೀಡಾಗಿದ್ದಾರೆ.
ಘಟನೆಯನ್ನು ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ ತೀವ್ರವಾಗಿ ಖಂಡಿಸಿದ್ದು, ವೈದ್ಯೆಯ ಹತ್ಯೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. KGMOA ಕೊಲ್ಲಂ ಜಿಲ್ಲೆಯಲ್ಲಿ ಮುಷ್ಕರ ಘೋಷಿಸಿದೆ.

ಇನ್ನೂ ವೈದ್ಯೆಯನ್ನು ಹತ್ಯೆ ಮಾಡಿದ ಶಿಕ್ಷಕ ಸಂದೀಪ್ ಮಾದಕ ವ್ಯಸನಿಯಾಗಿದ್ದು, ಮಾದಕ ವ್ಯಸನದ ಕಾರಣಕ್ಕಾಗಿ ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು. ಇತ್ತೀಚೆಗಷ್ಟೇ ಡಿ—ಅಡಿಕ್ಷನ್ ಸೆಂಟರ್ ನಿಂದ ಈತ ಹೊರ ಬಂದಿದ್ದ. ಇದಾದ ಬಳಿಕ ತನ್ನ ಮನೆಯಲ್ಲಿ ಸಮಸ್ಯೆ ಸೃಷ್ಟಿಸಿದ್ದ. ಇದೀಗ ಓರ್ವ ವೈದ್ಯೆಯನ್ನೇ ಬಲಿಪಡೆದಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ