ಡಿ.ಕೆ.ಶಿವಕುಮಾರ್ ನನಗೆ ಮಧ್ಯರಾತ್ರಿ 12:30ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ: ರಮೇಶ್ ಜಾರಕಿಹೊಳಿ - Mahanayaka

ಡಿ.ಕೆ.ಶಿವಕುಮಾರ್ ನನಗೆ ಮಧ್ಯರಾತ್ರಿ 12:30ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ: ರಮೇಶ್ ಜಾರಕಿಹೊಳಿ

dk shivakumar, ramesh jarakiholi
11/05/2023

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.


Provided by

ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡದಂತೆ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡದಂತೆ ತಾಕೀತು ಮಾಡಿದರು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಮಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತಮ್ಮ ವಿರುದ್ಧ ಕೇಳಿಬಂದ ಗಂಭೀರ ಆರೋಪದಿಂದ ಸಚಿವ ಸ್ಥಾನ ಕಳೆದುಕೊಂಡ ಸಿ ಡಿ ಪ್ರಕರಣ ಸೇರಿದಂತೆ ಕೆಲವು ಕೇಸುಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ