ಕರ್ನಾಟಕ ಚುನಾವಣಾ ಫಲಿತಾಂಶ: ಮಾಜಿ ಸಿಎಂ ಕುಮಾರಸ್ವಾಮಿಯವರಿಂದ ಪ್ರತಿಕ್ರಿಯೆ
ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.
ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw