ಸಿ.ಟಿ.ರವಿ ಅವರ ಸೋಲಿನ ಮಾಸ್ಟರ್ ಮೈಂಡ್ ಭೋಜೇಗೌಡರಿಗೆ ಹಾಲಿನ ಅಭಿಷೇಕ: ‘ನಾಲಿಗೆ ಸೋಲಿಗೆ ಕಾರಣ’ ಎಂದ ಭೋಜೇಗೌಡ
ಚಿಕ್ಕಮಗಳೂರು: ಸಿ.ಟಿ.ರವಿ ಅವರ ಸೋಲಿನ ಮಾಸ್ಟರ್ ಮೈಂಡ್ ಜೆಡಿಎಸ್ ನ ಭೋಜೇಗೌಡರಿಗೆ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿ ಹಾಲಿನ ಅಭಿಷೇಕ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಗೆಲುವಿಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಇದ್ದರೂ ಕೂಡ ಸಿ.ಟಿ.ರವಿ ವಿರುದ್ಧ ಅಖಾಡಕ್ಕಿಳಿದಿದ್ದ ಭೋಜೇಗೌಡ, ಕಾಂಗ್ರೆಸ್ ಗೆ ಮತ ಹಾಕಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿತ್ತು. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಸಿ.ಟಿ.ರವಿಗೆ ಸೋಲಿನ ರುಚಿ ತೋರಿಸಿದ್ದಾರೆ. ಇದೀಗ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಭೋಜೇಗೌಡ ಅವರಿಗೆ ಸನ್ಮಾನಿಸಲಾಗಿದೆ.
ಸಿ.ಟಿ.ರವಿಗೆ ಭೋಜೇಗೌಡ ಹೇಳಿದಿಷ್ಟು…
ಸಿ.ಟಿ.ರವಿ ಬುದ್ಧಿವಂತರಿದ್ದಾರೆ, ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆಗಿದ್ದರು, ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರುತ್ತಿತ್ತು. ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ ಎಂದಿದ್ದಾರೆ.
ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು. ಯಾರನ್ನೋ ಮೆಚ್ವಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ. ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. “ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್” ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ. ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ಚಿಕ್ಕಮಗಳೂರಿನಲ್ಲಿ ಎಸ್.ಎಲ್.ಭೋಜೇಗೌಡ ಹೇಳಿಕೆ ನೀಡಿದರು.
ಸಿ.ಟಿ.ರವಿಗೆ ಸಾಂತ್ವನ ಹೇಳಿದ ಎಳೆ ಕಂದ:
ಇನ್ನೂ ಚುನಾವಣೆಯಲ್ಲಿ ಸೋಲಿನ ಆಘಾತದಲ್ಲಿರುವ ಸಿ.ಟಿ.ರವಿ ಅವರಿಗೆ ಎಳೆಯ ಕಂದನೋರ್ವ ಸಾಂತ್ವನ ಹೇಳಿರುವ ವಿಡಿಯೋವೊಂದು ವೈರಲ್ ಆಗಿದೆ. ಸರ್…. ನಿಮ್ಮ ಜೊತೆ ನಾವಿರ್ತೇವೆ ಎಂದು ಬಾಲಕ ಧೈರ್ಯ ತುಂಬಿದ. ನಾವು ಬಿಜೆಪಿ ಜೊತೆ ಇರ್ತೇವಿ, ನೀವು ಭಯಪಡಬೇಡಿ ಎಂದು ಸಿ.ಟಿ.ರವಿ ನಿವಾಸಕ್ಕೆ ಭೇಟಿ ನೀಡಿ ಬಾಲಕ ಧೈರ್ಯ ತುಂಬಿದ.
20 ವರ್ಷಗಳ ಬಳಿಕ ಮೊದಲ ಬಾರಿಗೆ ಸಿ.ಟಿ.ರವಿ, ಸೋತಿದ್ರು. ಸೋಲಿ ಆಘಾತದಲ್ಲಿರುವ ಸಿ.ಟಿ.ರವಿಗೆ ಬಾಲಕ ಧೈರ್ಯ ತುಂಬಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw