ಬಿಜೆಪಿಯ ವಿಜಯೋತ್ಸವದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪೆರಾಡಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಹಲ್ಲೆಗೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ದಯಾನಂದ ಪೂಜಾರಿಗೆ ಧೈರ್ಯ ತುಂಬಿದ್ದಾರೆ. ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw