“ಕಗ್ಗಂಟು ಇಲ್ಲ, ಯಾವ ಗಂಟು ಇಲ್ಲ ಸಿದ್ದರಾಮಯ್ಯ ಸಿಎಂ”
ತುಮಕೂರು: ಸಿಎಂ ಆಯ್ಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ ಯಾವ ಗಂಟು ಇಲ್ಲ , ಎಲ್ಲಾ ಸರಾಗವಾಗಿದೆ. 18 ಕ್ಕೆ ಪ್ರಮಾಣ ವಚನ ಆಗಬಹುದು, ನನಗೆ ವಿಶ್ವಾಸ ಇದೆ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಧುಗಿರಿಯ ನೂತನ ಶಾಸಕ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ವಿಚಾರ ಇಂದು ಪೈನಲ್ ಆಗಲೇಬೇಕು . ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ. ಸಚಿವ ಸಂಪುಟ ರಚನೆ ಸ್ವಲ್ಪ ತಡವಾಗಬಹುದು. ಸದ್ಯಕ್ಕೆ ಸಿದ್ದರಾಮಯ್ಯ ಒಬ್ಬರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮೊದಲ ದಿನವೇ ಕ್ಯಾಬಿನೆಟ್ ಮಾಡ್ತಾರೆ. 10 ಕೆ.ಜಿ. ಅಕ್ಕಿ ಘೋಷಣೆ ಮಾಡ್ತಾರೆ. ಅನ್ನಭಾಗ್ಯ ಯೋಜನೆ ಜಾರಿಗೆ ತರೋದೆ ಮೊದಲ ತೀರ್ಮಾನವಾಗಿದೆ. ನಾನು ಸಹಕಾರ ಸಚಿವನಾಗಬೇಕು ಅದು ಬಿಟ್ಟು ಬೇರೇನೂ ಕೇಳಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw