ಇಂದು ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ: ಇಂದು ಸಿಎಂ ಸ್ಥಾನ ಫೈನಲ್ ಆಗುತ್ತಾ?
ನವದೆಹಲಿ: ಚುನಾವಣೆ ಗೆಲುವಿನ ನಂತರ ಸಿಎಂ ಹುದ್ದೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ತೀವ್ರ ಪೈಪೋಟಿಯ ನಂತರ ಇಂದು ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.
ನಾಲ್ಕನೆಯ ದಿನವಾದ ಇಂದು ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಪಕ್ಷದ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ಸಂಜೆ ಇಬ್ಬರು ಅಭ್ಯರ್ಥಿಗಳ ಜೊತೆಗೆ ಒಪ್ಪಂದ ನಡೆಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದರಾದರೂ ಯಾವುದೂ ಫಲಪ್ರದವಾಗಲಿಲ್ಲ.
ಡಿ.ಕೆ.ಶಿವಕುಮಾರ್ ಗಿಂತಲೂ ಸಿದ್ದರಾಮಯ್ಯನವರಿಗೆ ಹೆಚ್ಚಿನ ಶಾಸಕರ ಬಲವಿದೆ. ಆದರೆ, ಮುಖ್ಯಮಂತ್ರಿ ಸ್ಥಾನದಿಂದ ನಾನು ಹಿಂದಕ್ಕೆ ಸರಿಯುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಮ್ಮ ನಿರ್ಧಾರವನ್ನು ಖರ್ಗೆಯವರಿಗೆ ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಪಕ್ಷದ ಕೊಡುವ ಹುದ್ದೆಯಿಂದ ವಂಚಿತವಾದರೂ ನಾನು ಯಾವುದೇ ಬಂಡಾಯ ಎಬ್ಬಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಪದೇ ಪದೇ ಒತ್ತಿ ಹೇಳಿದ್ದಾರೆ. ಪಕ್ಷ ಬೇಕಾದರೆ ನನಗೆ ಜವಾಬ್ದಾರಿ ನೀಡಬಹುದು. ನಾನು ಯಾರನ್ನೂ ಒಡೆಯಲು ಬಯಸುವುದಿಲ್ಲ. ನಾನು ಜವಾಬ್ದಾರಿಯುತ ವ್ಯಕ್ತಿ, ಬೆನ್ನಿಗೆ ಚೂರಿ ಹಾಕುವುದಿಲ್ಲ, ಬ್ಲ್ಯಾಕ್ಮೇಲ್ ಮಾಡುವುದಿಲ್ಲ ಎಂದಿದ್ದಾರೆ.
ಇನ್ನೂ ರಾಜ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರ ತಂಡವನ್ನು ಕಳುಹಿಸಿದೆ. ಈ ವೀಕ್ಷಕರ ತಂಡ ನೀಡುವ ಅಭಿಪ್ರಾಯ ಸಿಎಂ ಸ್ಥಾನದ ಆಯ್ಕೆಯ ಮೇಲೆ ಪ್ರಭಾವ ಬೀರುವುದು ಖಚಿತವಾಗಿದೆ.
ಸಿದ್ದರಾಮಯ್ಯನವರು 2018ರಲ್ಲಿ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸಿದ ಮುಖ್ಯಮಂತ್ರಿಯಾಗಿದ್ದು, ಜನಮನದಲ್ಲಿ ನಾಯಕರಾಗಿ ಕಂಡು ಬಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಬಲವಾದ ಸಂಘಟನಾ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಮತ್ತು ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಪರಿಗಣಿಸಲ್ಪಟ್ಟಿದ್ದಾರೆ.
ಒಟ್ಟಿನಲ್ಲಿ ಕರ್ನಾಟಕ ಸಿಎಂ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದೆ ಎಂದೇ ಹೇಳಬಹುದು. ಹೈಕಮಾಂಡ್ ಇಂದು ಅಂತಿಮವಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw