ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ನ್ನು ಒಪ್ಪಿಸಿದ್ದು ಸೋನಿಯಾ ಗಾಂಧಿ!
ನವದೆಹಲಿ: ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಬಂದು 5 ದಿನಗಳ ನಂತರ ಕೊನೆಗೂ ಕರ್ನಾಟಕ ಸಿಎಂ ಹೆಸರು ಫೈನಲ್ ಆಗಿದೆ. ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸುದೀರ್ಘ ಸಮಾಲೋಚನೆಯ ಬಳಿಕವು ಸಿಎಂ ಸ್ಥಾನವೇ ಬೇಕು ಎಂಬ ಅಪೇಕ್ಷೆಯಲ್ಲಿ ಗಟ್ಟಿಯಾಗಿ ನಿಂತಿದ್ದ ಡಿಕೆಶಿಯನ್ನು ಕೊನೆಗೆ ಒಪ್ಪಿಸಿರುವುದು ಸೋನಿಯಾ ಗಾಂಧಿ ಎಂದು ತಿಳಿದು ಬಂದಿದೆ.
ಸೋನಿಯಾ ಗಾಂಧಿಯ ಮಧ್ಯಸ್ಥಿಕೆಯಲ್ಲಿ ಕರ್ನಾಟಕ ಸಿಎಂ ಆಯ್ಕೆ ಕಗ್ಗಂಟು ಬಗೆ ಹರಿದಿದೆ. ಸಿಎಂ ಸ್ಥಾನ ಬಿಟ್ಟು ಬೇರಾವುದೇ ಸ್ಥಾನ ಬೇಡ ಎಂದಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಒಪ್ಪಿಸಿದ್ದು, ಇಷ್ಟವಿಲ್ಲದಿದ್ದರೂ ಪಕ್ಷದ ನಾಯಕರ ಮಾತಿಗೆ ಗೌರವ ನೀಡಿ ಡಿ.ಕೆ.ಶಿವಕುಮಾರ್ ಅವರು ಒಪ್ಪಿಕೊಂಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw