ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಅಂತಿಮವಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡನೆ ಮಾಡಿದರು.
ಕೆಪಿಸಿಸಿ ಸಿಎಲ್ ಪಿ ಸಭೆ ನಡೆಸಿದ ಬಳಿಕ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯ ಪಾಲರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಈ ವೇಳೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕ ರಾಮಲಿಂಗರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಈ ವೇಳೆ ಜೊತೆಗಿದ್ದರು.
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಅಂತಿಮವಾಗುತ್ತಿದ್ದಂತೆಯೇ ಇತ್ತ ಡಾ.ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆಯ ಬಗ್ಗೆ ಮಾಹಿತಿ ನೀಡಿದರು. ಮೇ 20ರಂದು ಸಿದ್ದರಾಮಯ್ಯ ಅವರು, ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw