ಗೋಡೌನಲ್ಲಿ ಅಗ್ನಿ ಅವಘಡ: ಮೂರು ಬಸ್ ಗಳು ಬೆಂಕಿಗಾಹುತಿ - Mahanayaka

ಗೋಡೌನಲ್ಲಿ ಅಗ್ನಿ ಅವಘಡ: ಮೂರು ಬಸ್ ಗಳು ಬೆಂಕಿಗಾಹುತಿ

bus fire in bangalore
19/05/2023

ಬೆಂಗಳೂರು: ಗೋಡೌನಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಆರ್‍ಆರ್ ನಗರ ದ ಐಟಿಐ ಲೇಔಟ್ ನ ಇಂಡೆನ್ ಗ್ಯಾಸ್ ಏಜೆನ್ಸಿ ಸಮೀಪದಲ್ಲಿರುವ ಸ್ಕ್ರಾಪ್ ಗೋಡೌನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತಗುಲಿ ಇಡೀ ಗೋಡೌನ್ ಧಗ-ಧಗನೆ ಹೊತ್ತಿ ಉರಿದಿದೆ.

ಪರಿಣಾಮ ಮೂರು ಬಸ್‍ಗಳು ಸುಟ್ಟು ಕರಕಲಾಗಿವೆ. ಬೆಂಕಿ ಜ್ವಾಲೆ ವ್ಯಾಪಿಸದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ