ಗ್ಯಾರೆಂಟಿ ಯೋಜನೆಗಳಿಗೆ ಗ್ಯಾರೆಂಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ
ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ ಎಂದು ಭರವಸೆ ನೀಡಿದರು.
ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್ ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ ತೆರಳಿದಾಗ ಒಂದು ಸಾವಿರ ರೂ. ಮುಖಬೆಲೆ ನೋಟು ರದ್ದು ಮಾಡಿದ್ದರು. ಈ ಬಾರಿ 2 ಸಾವಿರ ಮುಖಬೆಲೆಯ ನೋಟು ರದ್ದು ಮಾಡಿದ್ದಾರೆ. ಇದರರ್ಥ ಇದರಿಂದ ದೇಶಕ್ಕೆ ಲಾಭವೋ, ನಷ್ಟವೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಮೋದಿ ಅವರ ಈ ಕೆಲಸ ದೇಶದ ಜನರಿಗೆ ತೊಂದರೆ ಆಗುತ್ತಿದೆ ಎಂದರು.
ನಮ್ಮ ಸರ್ಕಾರ ರಾಜ್ಯದಲ್ಲಿ ದ್ವೇಷವನ್ನು ಕಿತ್ತೊಗೆದು, ಪ್ರೀತಿ, ಸೌಹಾರ್ದತೆ, ಸಾಮರಸ್ಯದ ಸರ್ಕಾರವಾಗಿದೆ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಭರವಸೆ ಈಡೇರಿಸುತ್ತೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw