ಬಜಪೆ: ಭಾಸ್ಕರ್ ಮಳವೂರು ನಿಧನ: ಮೃತದೇಹ ದಾನ

ಕರ್ನಾಟಕ ದಲಿತ ಸಂಘರ್ಷ ಸಮಿತಿ “ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ” ಇದರ ಮಾಜಿ ಜಿಲ್ಲಾ ಸಂಚಾಲಕರು ಹಾಗೂ ಬಿಎಸ್ ಪಿ ಯ ಮೂಡಬಿದ್ರೆ ಉಸ್ತುವಾರಿ ಮತ್ತು ಎಸ್ ಸಿಡಿಸಿಸಿ ಬ್ಯಾಂಕ್ ಬಜಪೆಯ ಮಾಜಿ ನಿರ್ದೇಶಕರಾಗಿದ್ದ ಭಾಸ್ಕರ್ ಮಳವೂರು(67) ಇಂದು ನಿಧನರಾಗಿದ್ದಾರೆ.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ತನ್ನ ಮೃತ ದೇಹವನ್ನು ಆಸ್ಪತ್ರೆಗೆ ದಾನ ಮಾಡಬೇಕೆನ್ನುವ ಅವರ ಇಚ್ಛೆ ಯಂತೆ ಇವರ ಮೃತ ದೇಹವನ್ನು ಇಂದು “ಮಧ್ಯಾಹ್ನ ಸಿದ್ದಾರ್ಥ ನಗರದಲ್ಲಿರುವ” ಅವರ ಮನೆಯಲ್ಲಿ ವಿಧಿವಿಧಾನವನ್ನು ನೆರವೇರಿಸಿ ಆಸ್ಪತ್ರೆ ಗೆ ಹಸ್ತಾoತರಿಸಲಾಗುವುದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
ಮೃತರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದ. ಕ. ಜಿಲ್ಲಾ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರು ನಾಲ್ಕು ಮಕ್ಕಳು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw