ಪ್ರಧಾನಿ ನರೇಂದ್ರ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭೇಟಿ
ನವದೆಹಲಿ: ಜಪಾನ್ ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾಗವಹಿಸಿದ್ದು, ಇದೇ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ, ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.
ಉಕ್ರೇನ್ ಯುದ್ಧವು ಜಗತ್ತಿಗೆ ದೊಡ್ಡ ಸಮಸ್ಯೆಯಾಗಿದೆ. ಪ್ರಪಂಚದ ಮೇಲೆ ಹಲವಾರು ರೀತಿಯ ಪರಿಣಾಮ ಬೀರಿದೆ. ಇದನ್ನು ನಾನು ರಾಜಕೀಯ ಅಥವಾ ಆರ್ಥಿಕ ಸಮಸ್ಯೆ ಎಂದು ಪರಿಗಣಿಸುವುದಿಲ್ಲ. ಇದು ಮಾನವೀಯತೆ ಮತ್ತು ಮಾನವ ಮೌಲ್ಯಗಳ ಸಮಸ್ಯೆಯಾಗಿದೆ. ಯುದ್ಧ ಸಂಕಟ ನಮಗೆಲ್ಲರಿಗೂ ತಿಳಿದಿದೆ. ಕಳೆದ ವರ್ಷ ನಮ್ಮ ಮಕ್ಕಳು ಉಕ್ರೇನ್ ನಿಂದ ಹಿಂದಿರುಗಿ ಅಲ್ಲಿನ ಪರಿಸ್ಥಿತಿಗಳನ್ನು ಹೇಳಿದಾಗ, ನಿಮ್ಮ ನಾಗರಿಕರ ವೇದನೆಯಲ್ಲಿ ಚೆನ್ನಾಗಿ ನಾನು ಅರ್ಥ ಮಾಡಿಕೊಂಡಿದ್ದೇನೆ ಈ ಪರಿಸ್ಥಿತಿಯನ್ನು ಪರಿಹರಿಸಲು ನಾನು ಮತ್ತು ಭಾರತ ನಮ್ಮ ಸಾಮರ್ಥ್ಯ ಏನಿದೆ ಅದರಲ್ಲಿ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್ ಐ ಹಂಚಿಕೊಂಡ ಸಭೆಯ ವಿಡಿಯೋ ಕ್ಲಿಪ್ ನಲ್ಲಿ ಹೇಳುವುದು ಕೇಳಬಹುದು.
ರಷ್ಯಾ—ಉಕ್ರೇನ್ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು. ಶಾಂತಿ ಪ್ರಯತ್ನಗಳಿಗೆ ಕೊಡುಗೆ ಕೊಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ಎನ್ ಡಿ ಟಿವಿ ವರದಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw