ಕಾಲುವೆಗೆ ಬಿದ್ದು ಮೂವರು ಸಾವು: ಒಬ್ಬರನ್ನು ರಕ್ಷಿಸಲು ಹೋಗಿ ಮೂವರ ಜೀವ ಬಲಿ
ಚಿಕ್ಕಮಗಳೂರು: ಕಾಲುವೆಗೆ ಆಕಸ್ಮಿಕವಾಗಿ ಬಿದ್ದ ಒಬ್ಬರನ್ನು ರಕ್ಷಿಸಲು ಮುಂದಾದ ವೇಳೆ ಮೂವರು ಕಾಲುವೆಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ.
ರವಿ (31), ಅನನ್ಯ (17), ಶಾಮವೇಣಿ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು, ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು ಮುಂದಾಗಿದ್ದು, ಈ ವೇಳೆ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ.
ಮೃತ ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳಾಗಿದ್ದಾರೆ. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರಾಗಿದ್ದಾರೆ.
ಸಂಬಂಧಿ ಮನೆ ಲಕ್ಕವಳ್ಳಿಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ರವಿ ಮೃತದೇಹ ಪತ್ತೆಯಾಗಿದೆ, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw