ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ: ಬಸವರಾಜ ಬೊಮ್ಮಾಯಿ - Mahanayaka
7:20 PM Thursday 12 - December 2024

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ: ಬಸವರಾಜ ಬೊಮ್ಮಾಯಿ

cm bommai
22/05/2023

ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು,  ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಈ ಘಟನೆ ನಡೆಯೋದಿಕ್ಕೆ ಅವಕಾಶ ಕೊಟ್ಟಂತಾಗಿದೆ.  ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವ್ರು ಮಾಡಲಿಲ್ಲ ಎಂದು ಬೊಮ್ಮಾಯಿ ಆರೋಪ ಮಾಡಿದರು.

ನಾವು ಬೆಂಗಳೂರಿನಲ್ಲಿ ಎಸ್‌ ಡಿಆರ್‌ ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಗರದಲ್ಲಿ ಸಿಕ್ಕಾಪಟ್ಟೆ ಮರಗಳು ಬಿದ್ದಿವೆ ಎಂದರು.

ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ. ಮುಂದಿನ ಐದು ದಿನ ಹೀಗೇ ಬಿಟ್ಟರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಪರಿಹಾರ ಕ್ರಮಗಳನ್ನು ಆಧ್ಯತೆಯಿಂದ ಸಿಎಂ ಮಾಡಬೇಕಿದೆ. ಬಿಬಿಎಂಪಿ ಅಧಿಕಾರಿಗಳು‌ ಕೆಲಸ ಮಾಡೋರು ಮಾಡ್ತಾರೆ, ಮಾಡದಿರೋರು ಮಾಡಲ್ಲ. ಪ್ಲಾನ್ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ