ಒಳಚೆಡ್ಡಿ ಪರಿಶೀಲಿಸಿ ಇಬ್ಬರನ್ನು ಬಂಧಿಸಿದ ವಿಮಾನ ನಿಲ್ದಾಣದ ಅಧಿಕಾರಿಗಳು!
15/01/2021
ಮಂಗಳೂರು: ವಿದೇಶದಿಂದ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನ ಸಾಗಿಸಲು ನಾನಾ ರೀತಿಯ ಕಸರತ್ತುಗಳನ್ನು ಮಾಡಿ ಆಗಾಗಿ ಸಿಕ್ಕಿ ಬೀಳುತ್ತಿದ್ದಾರೆ. ಇಂತಹದ್ದೇ ಪ್ರಕರಣವೊಂದರಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಒಳ ಉಡುಪಿನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಬಂದಿದ್ದು, ಇದೀಗ ವಿಮಾನ ನಿಲ್ದಾಣದ ಕಸ್ಟಮ್ಸ್ ನ ಡಿ ಆರ್ ಐ ವಿಭಾಗದ ಅಧಿಕಾರಿಗಳು ಈತನನ್ನು ವಶಕ್ಕೆ ಪಡೆದಿದ್ದಾರೆ.
ಫೈಜಲ್(37) ಹಾಗೂ ಮೊಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ಪೇಸ್ಟ್ ರೂಪದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದರು. ಒಳ ಚೆಡ್ಡಿಯ ಜೇಬಿನಲ್ಲಿ ಚಿನ್ನ ಪತ್ತೆಯಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಒಳಚೆಡ್ಡಿಯಲ್ಲಿ ಸುಮಾರು 1.09 ಕೋಟಿ ರೂ. ಮೌಲ್ಯದ 2 ಕೆ.ಜಿ. ಚಿನ್ನ ಇರುವುದು ಪತ್ತೆಯಾಗಿದೆ. ಒಳಚೆಡ್ಡಿಯಲ್ಲಿ ಚಿನ್ನ ಅಡಗಿಸಿಕೊಂಡು ಬಂದು ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಹೋಗಲು ಆರೋಪಿಗಳು ಯತ್ನಿಸಿದ್ದಾರೆ. ಆದರೆ ಕೊನೆಗೂ ಸಿಕ್ಕಿಹಾಕಿಕೊಂಡಿದ್ದಾರೆ.