ನಡು ರಸ್ತೆಯಲ್ಲಿ ತಂಡಗಳ ನಡುವೆ ಮಾರಾಮಾರಿ: ಕಟ್ಟಿಗೆಯಿಂದ ಹಲ್ಲೆ
ಎರಡು ತಂಡಗಳ ನಡುವೆ ಜಗಳ ನಡೆದು ಕಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಎನ್ನಲಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ.
ಇನ್ನು ಈ ಘಟನೆ ಕುರಿತು ಪ್ರಕಟಣೆಯಲ್ಲಿ ಹೇಳಿಕೆ ನೀಡಿರುವ ದ.ಕ ಎಸ್ಪಿ, ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರ್ ನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw