ಕಿಚ್ಚ ಸುದೀಪ್ ಅವರ ಹೊಸ ಚಿತ್ರದ ಬಗ್ಗೆ ಸಿಕ್ತು ಅಪ್’ಡೇಟ್!

ಕಿಚ್ಚ ಸುದೀಪ್ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಮೂಲಕ ಭಾರೀ ಚರ್ಚೆಯಲ್ಲಿದ್ದರು. ವಿಕ್ರಾಂತ್ ರೋಣ ಚಿತ್ರದ ಬಳಿಕ ಸುದೀರ್ಘ ಕಾಲದವರೆಗೂ ಕಿಚ್ಚ ಸುದೀಪ್ ಅವರ ಚಿತ್ರಗಳು ಬಿಡುಗಡೆಯಾಗಿಲ್ಲ. ಅಭಿಮಾನಿಗಳು ಕೂಡ ಕಿಚ್ಚ ಸುದೀಪ್ ಅವರ ಮುಂದಿನ ಚಿತ್ರ ಯಾವುದು ಎಂದು ತಿಳಿಯಲು ಬಹಳ ಕಾತರದಿಂದಿದ್ದಾರೆ. ಇದೇ ಸಂದರ್ಭದಲ್ಲಿ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ದೊರಕಿದೆ.
ಹೌದು..! ಕಿಚ್ಚ ಸುದೀಪ್ ಅವರು ತಮ್ಮ ಮುಂದಿನ ಚಿತ್ರವನ್ನು ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆಯೊಂದಿಗೆ ನಡೆಸಲಿದ್ದಾರೆ. ಕಬಾಲಿ, ತುಪಾಕಿ, ಅಸುರನ್ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ‘ವಿ ಕ್ರಿಯೇಷನ್’ ಜೊತೆಗೆ ಸುದೀಪ್ ಕೆಲಸ ಮಾಡಲಿದ್ದಾರೆ.
ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾಕ್ಕೆ ಪ್ರೋಮೋ ಚಿತ್ರೀಕರಣ ನಡೆದಿತ್ತು. ಅವರು ಮೂರು ಸಿನಿಮಾಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಚಿತ್ರಗಳು ಒಂದರ ಹಿಂದೊಂದರಂತೆ ಸೆಟ್ಟೇರಲಿವೆ. ಜೂನ್ 1ರಂದು ಹೊಸ ಸಿನಿಮಾ ಲಾಂಚ್ ಆಗಲಿದೆ, ಶೀಘ್ರವೇ ಟೀಸರ್ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw