ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕವು ಪೊಲೀಸ್ ದೂರು ನೀಡಿದೆ.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜಾರಿ, ಉಪಾಧ್ಯಕ್ಷೆ ಮಮತಾ , ಪ್ರಧಾನ ಕಾರ್ಯದರ್ಶಿ ಸುಮಂಗಲಾ ನಾಯ್ಕ್, ಕಾರ್ಯದರ್ಶಿ ಸಿಂಧೂ ಡೆನ್ನಿಸ್, ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ, ಕುಸುಮ ಮಾಚಾರು ಉಪಸ್ಥಿತರಿದ್ದರು.
ಇನ್ನು ಅತ್ತ ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಕಾಂಗ್ರೆಸ್ ಮುಖಂಡರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿರುವುದಾಗಿ ಹೇಳಿದ್ದಾರೆ. ಈ ಕುರಿತು ವೀಡಿಯೋ ಚಿತ್ರಣವೂ ಇದೆ. ಮುಖ್ಯಮಂತ್ರಿಗಳ ವಿರುದ್ಧ ಈ ರೀತಿಯ ಆರೋಪ ಮಾಡಿರುವುದು ಸರಿಯಲ್ಲ. ಆದ್ದರಿಂದ ಹರೀಶ್ ಪೂಂಜ ಅವರನ್ನು ತನಿಖೆ ಮಾಡಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೇ 22ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ಆಯೋಜಿತ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw