RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ: ನಳಿನ್ ಕುಮಾರ್ ಕಟೀಲ್ ಗುಡುಗು - Mahanayaka
11:03 PM Wednesday 11 - December 2024

RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ: ನಳಿನ್ ಕುಮಾರ್ ಕಟೀಲ್ ಗುಡುಗು

nalinkumar kateel
26/05/2023

ಆರ್ ಎಸ್ ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ.

ಮಂಗಳೂರಿನಲ್ಲಿ ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಳಿನ್‌ಕುಮಾರ್  ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ ಎಂದರು.

ನರಸಿಂಹ ರಾವ್ ಸರ್ಕಾರ, ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ. ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಅವರು ಮೊದಲು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಲಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ ಎಂದರು. ಅದು ಬಿಟ್ಟು ರಾಜ್ಯವನ್ನು ವಿಭಜನಾವಾದದ ಮೂಲಕ ಕಟ್ಟೋದು ಬೇಡ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ ಎಂದು ಎಚ್ಚರಿಕೆ ನೀಡಿದರು.

ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ ಐನ್ನು ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು ? ಎಂದು ಪ್ರಶ್ನಿಸಿದರು. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಲಿ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ