ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಾವು ವ್ಯಾಸಂಗ ಮಾಡಿದ ಬೆಂಗಳೂರಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ( ಎನ್ ಪಿ ಎಸ್ ) ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿ ಆಶೀರ್ವಾದ ಪಡೆದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ
ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವುದಾಗಿ ಡಿಸಿಎಂ ಹೇಳಿದರು.
ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw