“ನಮಗೂ ಫ್ರೀ, ನಿಮಗೂ ಫ್ರೀ” ಅಂತ ಕಾಂಗ್ರೆಸ್ ದೋಖಾ ಮಾಡಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವುದು ನೋಡಿದರೆ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ.
ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw