1980ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ: ರಾಹುಲ್ ಗಾಂಧಿ
ಭಾರತದಲ್ಲಿ 1980 ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ. ಇದರ ವಿರುದ್ಧ ಅಭಿಮಾನದಿಂದ ಹೋರಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಮೊಹಬ್ಬತ್ ಕಿ ದುಕಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೆಲವು ಕ್ರಮಗಳು ಅಲ್ಪಸಂಖ್ಯಾತರು, ದಲಿತ ಮತ್ತು ಬುಡಕಟ್ಟು ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದರು.
ಕೇಂದ್ರದ ಕ್ರಮಗಳು ಮುಸ್ಲಿಮರ ಮೇಲೆ ನೇರವಾಗಿ ಪರಿಣಾಮ ಬೀರುತ್ತಿವೆ. ಆದರೆ ವಾಸ್ತವವಾಗಿ, ಇದನ್ನು ಎಲ್ಲಾ ಸಮುದಾಯಗಳ ಮೇಲೆ ಮಾಡಲಾಗುತ್ತಿದೆ. ಮುಸ್ಲಿಮರು ಹೇಗೆ ದಾಳಿಗೆ ಒಳಗಾಗುತ್ತೀರಿ, ಹಾಗೆಯೇ ಸಿಖ್ಖರು, ಕ್ರಿಶ್ಚಿಯನ್ನರು, ದಲಿತರು ಮತ್ತು ಬುಡಕಟ್ಟು ಜನಾಂಗದವರೂ ದಾಳಿಗೊಳಗಾಗುತ್ತಿದ್ದಾರೆ ಎಂದ ಅವರು, ದ್ವೇಷದಿಂದ ದ್ವೇಷವನ್ನು ಕತ್ತರಿಸಲು ಸಾಧ್ಯವಿಲ್ಲ. ಪ್ರೀತಿ ಮತ್ತು ವಾತ್ಸಲ್ಯದಿಂದ ಮಾತ್ರ ಸಾಧ್ಯ ಎಂದು ಇದೇ ವೇಳೆ ರಾಹುಲ್ ಹೇಳಿದರು.
ಭಾರತದಲ್ಲಿ ಮುಸ್ಲಿಮರಿಗೆ ಇಂದು ಏನಾಗುತ್ತಿದೆಯೋ ಅದನ್ನು 1980ರ ದಶಕದಲ್ಲಿ ದಲಿತರು ಅನುಭವಿಸಿದ್ದಾರೆ. ನೀವು 1980 ರ ದಶಕದಲ್ಲಿ ಉತ್ತರ ಪ್ರದೇಶಕ್ಕೆ ಹೋಗಿದ್ದರೆ, ದಲಿತ ಪರಿಸ್ಥಿತಿ ತಿಳಿಯುತ್ತಿತ್ತು. ನಾವು ಅದನ್ನು ಸವಾಲು ಸ್ವೀಕರಿಸಬೇಕು ಮತ್ತು ಅದರ ವಿರುದ್ಧ ಹೋರಾಡಬೇಕು ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw